March 19, 2026

ಧರ್ಮಸ್ಥಳ ಪ್ರಕರಣ: 5ನೇ ದಿನದ ಶೋಧ ಕಾರ್ಯಾಚರಣೆ

0
image_editor_output_image1998382844-1754117392283.jpg

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ 5ನೇ ದಿನಕ್ಕೆ ಕಾಲಿಟ್ಟಿದೆ.

ಎಸ್ಪಿ ದರ್ಜೆಯ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ ಸಹಿತ ಎಸ್‌ಐಟಿ ಅಧಿಕಾರಿಗಳ ಜೊತೆಗೆ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮಂಗಳೂರಿನ ಕೆಎಂಸಿ ವೈದ್ಯರ ತಂಡ, ಎಫ್.ಎಸ್.ಎಲ್. ತಂಡ, ಐ.ಎಸ್‌.ಡಿ. ಹಾಗೂ ಇತರ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ವಿಶೇಷ ತನಿಖಾ ತಂಡ (ಎಸ್‌ಐಟಿ)ವು ಈ ಪ್ರಕರಣದ ಸಾಕ್ಷಿ ದೂರುದಾರ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ತೋರಿಸಿರುವ 9ನೇ ಜಾಗಕ್ಕೆ ಆಗಮಿಸಿದ್ದು, ಅಗೆಯುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಇದಕ್ಕೂ ಮೊದಲು ಅಗೆಯುವ ಪ್ರಕ್ರಿಯೆ ಹೊರಗೆ ಕಾಣಿಸದಂತೆ ದೂರುದಾರು ಗುರುತಿಸಿರುವ ರಸ್ತೆ ಬದಿಯಲ್ಲೇ ಇರುವ 9, 10 ಮತ್ತು 11ನೇ ಜಾಗಗಳನ್ನು ಹಸಿರು ಪರದೆ ಕಟ್ಟಿ ಮುಚ್ಚಲಾಗಿದೆ.

Leave a Reply

Your email address will not be published. Required fields are marked *

error: Content is protected !!