ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ NIA ದಾಳಿ
ಸುರತ್ಕಲ್: ಸಂಘ ಪರಿವಾರದ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು 13 ಕಡೆಗಳಲ್ಲಿ ಎನ್ ಐ ಎ ಅಧಿಕಾರಿಗಳು ಇಂದು ಬೆಳಗ್ಗೆ ಆರು ಗಂಟೆಯ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.




