March 18, 2026

ವಿಟ್ಲ: ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯಿಂದ ನಗದು ಕಳವು ಪ್ರಕರಣ: ಮೂವರು ಯುವಕರ ಬಂಧನ

0
image_editor_output_image553187875-1754153745382

ವಿಟ್ಲ: ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ‌.

ವಿಟ್ಲ ಕಸಬಾ ಗ್ರಾಮದ ತ್ವಾಹಿದ್‌(19), ವಿಟ್ಲ ಕಸಬಾ ಗ್ರಾಮದ ನಿವಾಸಿ ಉಮ್ಮರ್‌ ಫಾರೂಕ್‌ (18), ಮೊಹಮ್ಮದ್‌ ನಬೀಲ್‌( 18) ಎಂಬವರನ್ನು ವಶಕ್ಕೆ ಪಡೆಯಲಾಗಿದೆ.

ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿದ್ದ ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು ಕನ್ಯಾನ ಗ್ರಾಮದ ದೇಲಂತ ಬೆಟ್ಟು ಶಾಲಾ ಪಕ್ಕದ ರಸ್ತೆಯ ಬದಿಯಲ್ಲಿ ಹಾಗೂ ದೇಲಂತಬೆಟ್ಟು ಚರ್ಚಿನ ಕೆಳಗಡೆ ರಸ್ತೆಯ ಬದಿಯಲ್ಲಿ ಅಳವಡಿಸಿದ್ದರು. ಕಾಣಿಕೆ ಕಟ್ಟೆಗಳಲ್ಲಿ ಸಂಗ್ರಹವಾಗುವ ಹಣವನ್ನು ತೆಗೆಯಲು ಜುಲೈ 26 ರಂದು ಸ್ಥಳಗಳಿಗೆ ತೆರಳಿದಾಗ, ಯಾರೋ ಕಳ್ಳರು ಎರಡೂ ಕಾಣಿಕೆ ಕಟ್ಟೆಗಳ ಬೀಗವನ್ನು ಒಡೆದು ಸುಮಾರು 12,000/- ರೂ ನಿಂದ 15,000/-ರೂ ಹಣವನ್ನು ಕಳವು ಮಾಡಿರುವುದು ಕಂಡುಬಂದಿರುತ್ತದೆ.

ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ.95/2025 ಕಲಂ. 303(2) BNS ರಂತೆ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!