ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನ
ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದ ಹಿರಿಯ ಬುಡಕಟ್ಟು ನಾಯಕ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೇನ್ ಸೋಮವಾರ ನಿಧನರಾಗಿದ್ದಾರೆ.
ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಶಿಬು ಸೊರೇನ್ ಅವರ ಪುತ್ರ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ದೃಢಪಡಿಸಿದ್ದಾರೆ. ಶಿಬು ಅವರು ಜೂನ್ ಕೊನೆಯ ವಾರದಲ್ಲಿ ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.




