March 19, 2026

ಕಂಕನಾಡಿ: ವಾಹನ ಸೈಡ್ ಕೊಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ

0
image_editor_output_image-600974770-1754291709394.jpg

ಮಂಗಳೂರು: ಟ್ರಾಫಿಕ್ ಜಾಮ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ಮಂಗಳೂರಿನ ಪಂಪ್ವೆಲ್ ನಿಂದ ಕಂಕನಾಡಿ ಸಂಪರ್ಕಿಸುವ ರಸ್ತೆಯಲ್ಲಿ ನಡೆದಿದೆ.

ವಾಹನಕ್ಕೆ ಸೈಡ್ ಕೊಡುವ ವಿಚಾರಕ್ಕೆ ಆಟೋ ಚಾಲಕ ಮತ್ತು ಕಾರು ಪ್ರಯಾಣಿಕರ ಮಧ್ಯೆ ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಅದೇ ಮಾರ್ಗವಾಗಿ ಬಂದ ಅಂಬ್ಯುಲೆನ್ಸ್ ಗೂ ದಾರಿ ನೀಡದೆ ಗುಂಪು ಹೊಡೆದಾಡಿಕೊಂಡಿದೆ ಎಂದು ಹೇಳಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಪೊಲೀಸರು ಅಗಸ್ಟ್ 1 ರಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಳಿಕ ಗಲಾಟೆ ಮಾಡಿದವರೇ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!