March 19, 2026

2 ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾಗಿದ್ದ ವೈದ್ಯ ಎ.ಕೆ. ರೈರು ನಿಧನ

0
image_editor_output_image118727172-1754292487120.jpg

ಮಂಗಳೂರು/ಕೇರಳ : ಕೇರಳದಲ್ಲಿ 2 ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾಗಿದ್ದ ವೈದ್ಯ ಎ.ಕೆ. ರೈರು ಗೋಪಾಲ್‌ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಕಣ್ಣೂರಿನ ತಮ್ಮ ಮನೆಯಲ್ಲೇ ಪುಟ್ಟ ಕ್ಲಿನಿಕ್ ಪ್ರಾರಂಭಿಸಿದ್ದ ಡಾ.ಗೋಪಾಲ್ ಕೇವಲ 2 ರೂಪಾಯಿಗೆ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಬಡವರ ಪಾಲಿಗೆ ಆಶಾಕಿರಣವಾಗಿದ್ದರು. ವಿದ್ಯಾರ್ಥಿಗಳು ಹಾಗೂ ಕೆಲಸಕ್ಕೆ ಹೋಗುವವರಿಗೆ ಅನುಕೂಲವಾಗಲೆಂದು ಬೆಳಿಗ್ಗೆ 3 ಗಂಟೆಗೆ ಕ್ಲಿನಿಕ್ ತೆರೆಯುತ್ತಿದ್ದರು.

ಡಾ.ಗೋಪಾಲ್‌ ಅವರ ನಿಸ್ವಾರ್ಥ ಸೇವೆಗೆ ‘ಕೇರಳದ ಅತ್ಯುತ್ತಮ ಕುಟುಂಬ ವೈದ್ಯ’ ಎಂದು ಗುರುತಿಸಿ ಭಾರತೀಯ ವೈದ್ಯಕೀಯ ಸಂಘ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *

error: Content is protected !!