March 19, 2026

ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

0
image_editor_output_image-1816938221-1754382909615.jpg

ಕಾಶ್ಮೀರ: ದೀರ್ಘಕಾಲದ ಅನಾರೋಗ್ಯದ ನಂತರ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮಂಗಳವಾರ ತಮ್ಮ 79ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

2018ರ ಆಗಸ್ಟ್ 2019ರ ಅಕ್ಟೋಬರ್‌ವರೆಗೆ ಮಲಿಕ್ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅವರ ಅಧಿಕಾರಾವಧಿಯಲ್ಲಿಯೇ ಅಂದರೆ 2019ರ ಆಗಸ್ಟ್ 5ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು. ಅದಾದ ಬಳಿಕ ಗೋವಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು. ಅದಾದ ಬಳಿಕ 2022ರ ಅಕ್ಟೋಬರ್‌ನಲ್ಲಿ ಮೇಘಾಲಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!