September 21, 2026

ಫಿಟ್ನೆಸ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ 3ನೇ ಮಹಡಿಯಿಂದ ಬಿದ್ದು ಸಾವು

0
image_editor_output_image1314905644-1754458049429.jpg

ಬೆಂಗಳೂರು: ಫಿಟ್ನೆಸ್ ಸೆಂಟರ್ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಅದೇ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಜೀವ ಕಳೆದುಕೊಂಡಿದ್ದು ಈ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ಈ ಘಟನೆ ನಡೆದಿದೆ.

ಮೃತರನ್ನು ರಕ್ಷಿತಾ (20) ಎಂದು ಗುರುತಿಸಲಾಗಿದೆ. ಕಡಬಗೆರೆಯಲ್ಲಿರುವ ಜುನಿಫರ್ ಫಿಟ್ನೆಸ್ ಸೆಂಟರ್‌ನಲ್ಲಿ ರಿಸೆಪ್ಷನಿಸ್ಟ್ ಆಗಿ ಯುವತಿ ಕೆಲಸ ಮಾಡುತ್ತಿದ್ದರು. ಕಳೆದ ಎಂಟು ತಿಂಗಳಿನಿಂದ ಇಲ್ಲಿಯೇ ಕೆಲಸ ಮಾಡಿಕೊಂಡು ಇದ್ದರು. ಆದರೆ ಫಿಟ್ನೆಸ್ ಸೆಂಟರ್‌ನ ಮೂರನೇ ಮಹಡಿಗೆ ಹೋಗಿ ಅಲ್ಲಿಂದ ಬಿದ್ದು ಜೀವ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅನುಮಾನ ವ್ಯಕ್ತವಾಗಿದೆ.

 

ಇನ್ನು ಯುವತಿ ಜೀವ ಕಳೆದುಕೊಳ್ಳಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ. ಮೂರನೇ ಮಹಡಿಯಿಂದ ಬಿದ್ದಿದ್ದರಿಂದ ಸ್ಥಳದಲ್ಲೇ ಜೀವ ಹೋಗಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು, ಪೊಲೀಸರ ತನಿಖೆಯಿಂದ ಸತ್ಯ ಏನು ಎಂಬುದು ಗೊತ್ತಾಗಬೇಕಿದೆ.

Leave a Reply

Your email address will not be published. Required fields are marked *

You may have missed

error: Content is protected !!