ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ: ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಆನೇಕಲ್: ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದ ಆರೋಪಿಯು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ನಡೆದಿದೆ.
ಮಂದಿರ ಮಂಡಲ್ (27) ಕೊಲೆಯಾದ ಮಹಿಳೆ ಹಾಗೂ ಸುಮನ್ ಮಂಡಲ್ (28) ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ. ಪತಿಯ ಸ್ನೇಹಿತನೇ ಮಹಿಳೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಕಳೆದ 8 ವರ್ಷದ ಹಿಂದೆ ಬಿಜೋನ್ ಮಂಡಲ್ ಎಂಬಾತನನ್ನು ಮಹಿಳೆ ವಿವಾಹವಾಗಿದ್ದಳು. ದಂಪತಿಗೆ ಆರು ವರ್ಷದ ಗಂಡು ಮಗನಿದ್ದ. ಎರಡು ವರ್ಷಗಳಿಂದ ಪತಿ, ಪತ್ನಿ ಇಬ್ಬರೂ ಬೇರ್ಪಟ್ಟಿದ್ದರು. ಬಳಿಕ ಮಹಿಳೆಯು ತಿರುಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಿದ್ದಳು.




