March 18, 2026

ಚಿಕಿತ್ಸೆಗೆ ಬಂದಿದ್ದ ಮಾನಸಿಕ ಅಸ್ವಸ್ಥನನ್ನು ಮದುವೆಯಾಗಿ ಆತ್ಮಹತ್ಯೆಗೆ ಮಾಡಿಕೊಂಡ ವೈದ್ಯೆ

0
image_editor_output_image-955418211-1754564938064.jpg

ಹೈದರಾಬಾದ್: ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.

ಪತಿ ಮತ್ತು ಅತ್ತೆ-ಮಾವನ ಕಿರುಕುಳದಿಂದ ಬೇಸತ್ತ 33 ವರ್ಷದ ಮನೋವೈದ್ಯೆಯೊಬ್ಬರು ಸನತ್‌ನಗರ ಜೆಕ್ ಕಾಲೋನಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಳನ್ನು ಎ.ರಜಿತಾ ಎಂದು ಗುರುತಿಸಲಾಗಿದ್ದು, ಆಕೆಯ ಪತಿ ರೋಹಿತ್ ಮತ್ತು ಅವರ ಕುಟುಂಬದಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಯುವತಿಯ ತಂದೆ ಸಬ್ ಇನ್ಸ್‌ಪೆಕ್ಟರ್ ನರಸಿಂಹ ಗೌಡ್ ನೀಡಿದ ದೂರಿನ ಆಧಾರದ ಮೇಲೆ ಸಂಜೀವ ರೆಡ್ಡಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!