March 18, 2026

ಬೆಳ್ತಂಗಡಿ: ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

0
image_editor_output_image1444588883-1754588154277

ಬೆಳ್ತಂಗಡಿ: ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿಯ ಜೆರೋಮ್ ಬರ್ಬೋಝಾ‌ಎಂಬವರು ನೀಡಿದ ದೂರಿನಂತೆ ಪುನೀತ್‌ ಕೆರೆಹಳ್ಳಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ (37ವ) ಎಂಬವರ ದೂರಿನಂತೆ, ಸದ್ರಿಯವರು ಆ. 7 ರಂದು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ ಬುಕ್‌ ನಲ್ಲಿ ಸಂದೇಶಗಳನ್ನು ಪರಿಶೀಲಿಸುತ್ತಿರುವಾಗ, ಪುನೀತ್‌ ಕೆರೆಹಳ್ಳಿ ರವರು ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣಾ ಅಕ್ರ:80/2025, ಕಲಂ: 296 BNS 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

error: Content is protected !!