ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲಿನ ದಾಳಿಯನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಇಂದು ಪ್ರತಿಭಟನೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಫ್ಯೂಡಲ್ ಗೂಂಡಾಗಳಿಂದ ಯುಟ್ಯೂಬರ್ ಗಳ ಮೇಲಿನ ಅಮಾನವೀಯ ದೈಹಿಕ ಹಲ್ಲೆಯನ್ನು ಖಂಡಿಸಿ ಹಾಗೂ ಎಲ್ಲಾ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಎಸ್ ಡಿ ಪಿ ಐ ಬೆಳ್ತಂಗಡಿ ವತಿಯಿಂದ ಆಗಸ್ಟ್ 08, ಶುಕ್ರವಾರ (ಇಂದು) ಸಂಜೆ 3.30ಕ್ಕೆ ಬೆಳ್ತಂಗಡಿ ತಾಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಅನ್ಯಾಯದ ವಿರುದ್ಧದ ಧ್ವನಿ ಅಡಗಿಸಲು ಪ್ರಯತ್ನ ಪಡುತ್ತಿರುವ ಶಕ್ತಿಗಳ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಅಶ್ಫಾಕ್ ಪೂಂಜಾಲ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




