ಮಂಗಳೂರು: ನಿಲ್ಲಿಸಿದ್ದ ಕಂಟೈನರ್‌ಗೆ ದ್ವಿಚಕ್ರ ವಾಹನ ಢಿಕ್ಕಿ; ಸವಾರ ಸಾವು
ಮಂಗಳೂರು: ನಿಲ್ಲಿಸಿದ್ದ ಕಂಟೈನರ್‌ಗೆ ದ್ವಿಚಕ್ರ ವಾಹನ ಢಿಕ್ಕಿಯಾಗಿ ಯುವಕ ಸಾವನ್ನಪ್ಪಿದ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮೊಡಂಕಾಪು ನಿವಾಸಿ 24 ವರ್ಷ ಪ್ರಾಯದ ಮೆಲ್ರಾಯ್ ಶಾನ್ ಡಿ’ಸೋಜಾ ಎಂದು ಗುರುತಿಸಲಾಗಿದೆ. ಅವರು ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಹಾಗೆಯೇ ಸರ್ಕಾರಿ ಆಸ್ಪತ್ರೆಯಲ್ಲಿ ಇಂಟರ್ನ್ ಆಗಿಯೂ ಕೆಲಸ ಮಾಡುತ್ತಿದ್ದರು.
ಸ್ಕೂಟರ್ ಚಲಾಯಿಸಿಕೊಂಡು ಬಲ್ಮಠ ಕಡೆಯಿಂದ ಹಂಪನಕಟ್ಟೆ ಭಾಗಕ್ಕೆ ಹೋಗುತ್ತಿದ್ದಾಗ ಹಂಪನಕಟ್ಟೆಯಲ್ಲಿ ಮಾರುತಿ ಸುಜುಕಿ ಅರೆನಾ ಕಟ್ಟಡದ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.
ತಲೆಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದ ಮೆಲ್ರಾಯ್ ಅವರು ಚಿಕಿತ್ದೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




