March 18, 2026

ಬಂಟ್ವಾಳ: ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

0
FotoJet-26-16.jpg

ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಈಗಾಗಲೇ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಿರುವ ಪೊಲೀಸರು ಆ.10 ರಂದು ರಂಜಿತ್ ಯಾನೆ ರಂಜು (35) ಎಂಬಾತನನ್ನು ಬಂಧಿಸಿದ್ದಾರೆ.

ಮೇ 27ರಂದು ಆರೋಪಿಗಳು ಅಬ್ದುಲ್ ರಹ್ಮಾನ್ ಅವರನ್ನು ಹತ್ಯೆಗೈದು ಮತ್ತು ಅವರ ಸ್ನೇಹಿತ ಕಲಂದರ್ ಶಾಫಿ ಅವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!