ಧರ್ಮಸ್ಥಳ ಪ್ರಕರಣ: ಎಸ್ಐಟಿ ತನಿಖೆಯ ಮಧ್ಯಂತರ ವರದಿ ಬಿಡುಗಡೆಗೆ ಜೈನ ಸಮುದಾಯದ ಮುಖಂಡರ ಆಗ್ರಹ
ಹುಬ್ಬಳ್ಳಿ: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ನಡೆಸುತ್ತಿರುವ ತನಿಖೆಯ ಮಧ್ಯಂತರ ವರದಿಯನ್ನು ಎಸ್ ಐಟಿ ಪ್ರಕಟಿಸಬೇಕು ಎಂದು ಜೈನ ಸಮಾಜದ ಮುಖಂಡರು ಆಗ್ರಹಿಸಿದರು.
ಹುಬ್ಬಳ್ಳಿಯ ವರೂರಿನ ನವಗ್ರಹತೀರ್ಥ ಕ್ಷೇತ್ರದಲ್ಲಿ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಭಾನುವಾರ ನಡೆದ ಜೈನ ಸಮಾಜದ ಮುಖಂಡರು, ಜೈನ ಮುನಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಣಯಿಸಲಾಯಿತು. ಪ್ರಕರಣದ ಸಾಕ್ಷಿ ದೂರುದಾರ ಹೇಳಿದ್ದ ಬಹುತೇಕ ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದೆ. ಆತನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಇದು ಹೀಗೆಯೇ ಮುಂದುವರಿದರೆ ಮಂಜುನಾಥಸ್ವಾಮಿ ದೇವಸ್ಥಾನವನ್ನು ನೆಲಸಮಗೊಳಿಸುವ ಅಪಾಯವಿದೆ ಎಂದು ಮುಖಂಡರು ಸಭೆಯಲ್ಲಿ ಹೇಳಿದರು.
themangaloremirror.in
themangaloremirror.in
KARNATAKAಧರ್ಮಸ್ಥಳ ಪ್ರಕರಣದ ಎಸ್ಐಟಿ ತನಿಖೆಯ ಮಧ್ಯಂತರ ವರದಿಗೆ ಜೈನ ಸಮುದಾಯ ಮುಖಂಡರ ಆಗ್ರಹ
ಹುಬ್ಬಳ್ಳಿ ಅಗಸ್ಟ್ 11: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ನಡೆಸುತ್ತಿರುವ ತನಿಖೆಯ ಮಧ್ಯಂತರ ವರದಿಯನ್ನು ಎಸ್ ಐಟಿ ಪ್ರಕಟಿಸಬೇಕು ಎಂದು ಜೈನ ಸಮಾಜದ ಮುಖಂಡರು ಆಗ್ರಹಿಸಿದರು.
ಹುಬ್ಬಳ್ಳಿಯ ವರೂರಿನ ನವಗ್ರಹತೀರ್ಥ ಕ್ಷೇತ್ರದಲ್ಲಿ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಭಾನುವಾರ ನಡೆದ ಜೈನ ಸಮಾಜದ ಮುಖಂಡರು, ಜೈನ ಮುನಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಣಯಿಸಲಾಯಿತು. ಪ್ರಕರಣದ ಸಾಕ್ಷಿ ದೂರುದಾರ ಹೇಳಿದ್ದ ಬಹುತೇಕ ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದೆ. ಆತನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಇದು ಹೀಗೆಯೇ ಮುಂದುವರಿದರೆ ಮಂಜುನಾಥಸ್ವಾಮಿ ದೇವಸ್ಥಾನವನ್ನು ನೆಲಸಮಗೊಳಿಸುವ ಅಪಾಯವಿದೆ ಎಂದು ಮುಖಂಡರು ಸಭೆಯಲ್ಲಿ ಹೇಳಿದರು.
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದ ಗಿರೀಶ ಮಟ್ಟೆಣ್ಣವರ ಕೂಡಲೇ ಕ್ಷಮೆ ಕೇಳಬೇಕು. ಆತನ ವಿರುದ್ಧ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಜೈನ ಸಮಾಜದ ವತಿಯಿಂದ ಪ್ರಕರಣದ ದಾಖಲಿಸಲಾಗುವುದು. ಕೂಡಲೇ ಆತನನ್ನು ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದರು. ಧಾರವಾಡ ಕಲಾಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸೋಮವಾರ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿ, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು. ಬೇಡಿಕೆ ಈಡೇರಿಸದಿದ್ದರೆ ಸೆಪ್ಟೆಂಬರ್ 1ರಂದು ಧಾರವಾಡ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.