ಬೆಳ್ತಂಗಡಿ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಎಫ್ಐಆರ್ ಗಳ ಸಂಖ್ಯೆ: ಬೆದರಿಕೆ ಆರೋಪದಡಿ 17 ಮಂದಿ ವಿರುದ್ಧ ದೂರು
ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಒಂದು ಕಡೆ ಎಸ್ಐಟಿ ನಡೆಸುತ್ತಿದ್ದರೆ, ಇನ್ನೊಂದು ಕಡೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ದಿನದಿಂದ ದಿನಕ್ಕೆ ಎಫ್ಐಆರ್ ಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಒಬ್ಬರು ಇನ್ನೊಬ್ಬರ ಮೇಲೆ ಎಫ್ಐಆರ್ ದಾಖಲಿಸುತ್ತಲೇ ಇದ್ದಾರೆ.
ಇದೀಗ ಅಗಸ್ಟ್ 6 ರಂದು ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಅದೇ ದಿನ ಸದ್ರಿ ಘಟನಾ ಸ್ಥಳದಲ್ಲಿದ್ದ ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ ಎಂಬವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆಗೆ ಹಾಗೂ ಕೊಲೆಗೆ ಯತ್ನಿಸಿರುತ್ತಾರೆ ಎಂಬುದಾಗಿ ಸದ್ರಿ ಜಯಂತ್ ಟಿ ರವರು ಈ ದಿನ ದಿನಾಂಕ: 11.08.2025ರಂದು ಧರ್ಮಸ್ಥಳ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.





