March 18, 2026

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ, ಧರ್ಮಸ್ಥಳ ಗ್ರಾಮದಲ್ಲಿ ಮಾಹಿತಿ ಸಂಗ್ರಹಿಸಿದ NHRC ತಂಡ

0
image_editor_output_image997170292-1754979450847.jpg

ಧರ್ಮಸ್ಥಳ: ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡದ ತನಿಖೆ ನಡೆಯುತ್ತಿರುವಾಗಲೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ತಂಡ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಗ್ರಾಮಕ್ಕೆ ಆಗಮಿಸಿ ಮಾಹಿತಿಗಳನ್ನು ಪಡೆದಿದೆ.

ಎನ್‌ಎಚ್‌ಆರ್‌ಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಎಸ್‌ಎಸ್‌ಪಿ ಯುವರಾಜ್, ಡಿವೈಎಸ್‌ಪಿ ರವಿ ಸಿಂಗ್ ಸೇರಿದಂತೆ ಇತರರನ್ನು ಒಳಗೊಂಡ ಎನ್‌ಎಚ್‌ಆರ್‌ಸಿ ತಂಡವು ಆಗಮಿಸಿದೆ.

ಈ ತಂಡವು ಆರಂಭದಲ್ಲಿ ಎಸ್‌ಐಟಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳು ಮತ್ತು ದೂರುದಾರನ‌ ಜತೆಗೆ ಮಾತುಕತೆ ನಡೆಸಿ ಮಹತ್ವದ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!