December 19, 2025

ಕೆಎಸ್‌ಆರ್ ಟಿಸಿ ಖಾಸಗೀಕರಣ ಮಾಡುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದೆ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

0
n3442639301640339798908c502c31dff8bd040889110119bdcc568aeefc801ac22f9954ee9aa0cdf5b6914.jpg

ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆಯಾದ ಕೆಎಸ್‌ಆರ್ ಟಿಸಿ ಖಾಸಗೀಕರಣ ಮಾಡುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆಎಸ್ ಆರ್ ಟಿಸಿ ಖಾಸಗೀಕರಣ ಮಾಡುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ. ಇದೊಂದು ಸೇವೆ ನೀಡುವ ಸಂಸ್ಥೆಯಾಗಿದೆ. ಹಾಗಾಗಿ, ಲಾಭ-ನಷ್ಟವನ್ನು ಗಮನಿಸದೆ ರಾಜ್ಯದಲ್ಲಿ ಸಾರಿಗೆ ಸೇವೆ ಒದಗಿಸಲಿದೆ ಎಂದು ತಿಳಿಸಿದರು.

ರಾಜ್ಯ ಸಾರಿಗೆ ನಿಗಮ ಕಳೆದ ಐದು ವರ್ಷದಲ್ಲಿ 233.10 ಕೋಟಿ ಸಾಲ ಮಾಡಿದೆ. ಅದರಲ್ಲಿ 195 ಕೋಟಿ ಸಾಲ ಮರುಪಾವತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!