December 16, 2025

ಧರ್ಮಸ್ಥಳ ಪ್ರಕರಣ: 13ನೇ ಸ್ಥಳದಲ್ಲೂ ಅಸ್ಥಿಪಂಜರಗಳು ಪತ್ತೆಯಾಗದಿದ್ದರೆ ಎಸ್‌ಐಟಿ ಶೋಧ ಸ್ಥಗಿತಗೊಳಿಸಲು ತೀರ್ಮಾನ: ಸಿದ್ದರಾಮಯ್ಯ

0
IMG-20250812-WA0001.jpg

ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹಾಗೂ ದೂರುದಾರ ತೋರಿಸಿರುವ 13ನೇ ಸ್ಥಳದಲ್ಲೂ ಅಸ್ಥಿಪಂಜರಗಳು ಪತ್ತೆಯಾಗದಿದ್ದರೆ ಎಸ್‌ಐಟಿ ಶೋಧ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಯಾರೂ ಭಾವನಾತ್ಮಕವಾಗಿ ಹೇಳಿಕೆ ನೀಡಬೇಡಿ ಎಂದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಈಗಾಗಲೇ ಎಸ್‌ಐಟಿ 12 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. 13ನೇ ಸ್ಥಳದಲ್ಲೂ ಯಾವುದೇ ಅಸ್ಥಿಪಂಜರ ಪತ್ತೆಯಾಗದೇ ಹೋದಲ್ಲಿ ಎಸ್‌ಐಟಿ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಬೇಕಾಗಬಹುದು. ಈ ಬಗ್ಗೆ ಸಚಿವರ ಜೊತೆಗೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆಂತು ತಿಳಿದು ಬಂದಿದೆ.

ದೂರುದಾರ-ಸಾಕ್ಷಿಯು ಮಾಜಿ ನೈರ್ಮಲ್ಯ ಕಾರ್ಮಿಕರಾಗಿದ್ದು, ಒಂದು ದಶಕದ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತರ ಶವಗಳನ್ನು ಹೂತಿದ್ದೆ ಎಂದು ಆರೋಪಿಸಿದ್ದಾರೆ. ಜುಲೈ 19 ರಂದು ರಚಿಸಲಾದ DGP ಪ್ರಣಬ್ ಮೊಹಂತಿ ನೇತೃತ್ವದಲ್ಲಿ SIT ಈ ಪ್ರಕರಣದ ತನಿಖೆ ನಡೆಸುತ್ತಿದೆ.

Leave a Reply

Your email address will not be published. Required fields are marked *

error: Content is protected !!