February 1, 2026

ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಈಡಿ ದಾಳಿ

0
n676595483175506824100733863643be897098bf006dc895f2f58acf4fd1755219de2af5ba43ee04734b72.jpg

ಕಾರವಾರ: ಬೇಲೇಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರ ಸದಾಶಿವಗಡದಲ್ಲಿರುವ ಮನೆ ಮೇಲೆ ಬುಧವಾರ ಬೆಳಗ್ಗೆ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ಸಮಯದಲ್ಲಿ ಅವರು ವಿಧಾನಸಭೆ ಅಧಿವೇಶನಕ್ಕಾಗಿ ಬೆಂಗಳೂರಿಗೆ ತೆರಳಿದ್ದರು.

ಆರು ಜನ ಅಧಿಕಾರಿಗಳನ್ನು ಒಳಗೊಂಡ ತಂಡವು ನಾಲ್ಕು ವಾಹನಗಳಲ್ಲಿ ನಸುಕಿನ ಜಾವ ಆಗಮಿಸಿದ್ದು, ಮನೆಯೊಳಗೆ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ ಎಂದು ಮೂಲಗಳು ತಿಳಿಸಿವೆ. ಮನೆಯ ಹೊರಗಡೆ ಸಿಐಎಸ್‌ಎಫ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಸತೀಶ್ ಸೈಲ್ ಅವರು ಹಿಂದೆ ಬೇಲೆಕೇರಿ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಡೆ ಬಂದಿದ್ದರು.

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್ ನಲ್ಲಿ ಜಾಮೀನು ಪಡೆದುಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!