February 2, 2026

ಬಂಟ್ವಾಳ: ಕಲ್ಲಡ್ಕ ಮೇಲ್ಸತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ

0
image_editor_output_image-792181510-1755068652943.jpg

ಬಂಟ್ವಾಳ: ನೂತನವಾಗಿ ನಿರ್ಮಾಣಗೊಂಡು ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಬಂದು ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಚಾಲಕ ಉಪ್ಪಿನಂಗಡಿ ನಿವಾಸಿ ಖಲೀಲ್ ಎಂಬಾತ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದು, ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಕಂಪೆನಿಯೊಂದರ ಐಸ್ ಕ್ರೀಮ್ ಸಾಗಿಸುವ ಪ್ರೀಝರ್ ವಾಹನ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿ ಸಂಪೂರ್ಣ ಜಖಂಗೊಂಡಿದೆ.ಇದನ್ನೂ ಓದಿ: ಉಡುಪಿ: ತಾಯಿ ಮತ್ತು ಪತ್ನಿಯ ಕಣ್ಮುಂದೆಯೇ ಪತಿಯ ಬರ್ಬರ ಹ*ತ್ಯೆಕಳೆದ ಎರಡು ದಿನಗಳಿಂದ ಲಾರಿಯೊಂದು ಕಲ್ಲಡ್ಕ ಪ್ರೈ ಓವ‌ರ್ ಮೇಲೆ ಕೆಟ್ಟು ನಿಂತಿದ್ದು, ಲಾರಿ ಚಾಲಕನಿಗೆ ಮುಂಜಾನೆ ವೇಳೆ ಕಣ್ಣಿಗೆ ಕಾಣದೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.ನೂತನ ಪ್ರೈ ಓವರ್ ನಲ್ಲಿ ಇನ್ನೂ ಕೂಡ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ದೀಪಗಳ ಅಳವಡಿಕೆಯಾಗಿಲ್ಲ ಮತ್ತು ಕೆಟ್ಟು ನಿಂತ ಲಾರಿಗೆ ಯಾವುದೇ ಸೂಚನ ಫಲಕ ಕೂಡ ಅಳವಡಿಸಿರಲಿಲ್ಲ ಎಂಬ ಆರೋಪ ಕೇಳಿ ಬಂದಿವೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!