February 2, 2026

ಗಣೇಶ ಹಬ್ಬ, ಮೀಲಾದುನ್ನಬಿ ಆಚರಣೆ: ಡಿಜೆ ಸಿಸ್ಟಂ ಬಳಕೆ ನಿಷೇಧ: ರಾಜ್ಯ ಸರ್ಕಾರ ಆದೇಶ

0
image_editor_output_image1202147464-1755075331578.jpg

ಬೆಂಗಳೂರು: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.

ಆಗೋಸ್ಟ್ 27 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹೀಗಾಗಿ ಆ.27ರಿಂದ ಸೆ.15ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ.

ಅಲ್ಲದೇ ಸಪ್ಟೆಂಬರ್ 5 ರಿಂದ 10ರವರೆಗೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ. ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇದೆ.

ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ರಾಜ್ಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!