ಬಂಟ್ವಾಳ ಸಹಿತ ಕರಾವಳಿ ಪ್ರದೇಶದಲ್ಲಿ ಮತ್ತೆ ತೀವ್ರಗೊಂಡ ಮುಂಗಾರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆ. 19ರವರೆಗೆ ಭಾರೀ ಮಳೆ ಸಾಧ್ಯತೆ
ಮಂಗಳೂರು: ಬಂಟ್ವಾಳ ಸಹಿತ ಕರಾವಳಿ ಪ್ರದೇಶದಲ್ಲಿ ಮುಂಗಾರು ಮಳೆಯ ತೀವ್ರತೆ ಮತ್ತೆ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆಗೋಸ್ಟ್ 19ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಷಿದೆ.
ನಿನ್ನೆ(ಆ.13) ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಿದೆ.
ಕವಿದ ಇಂದು ಬೆಳಿಗ್ಗೆಯಿಂದಲೇ ಮೋಡ ವಾತಾವರಣವಿದ್ದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಮಣಿಪಾಲ, ಹೆಬ್ರಿ, ಕಾರ್ಕಳ, ಕುಂದಾಪುರ ಮತ್ತು ಬೈಂದೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಳೆಯಾದ ವರದಿಯಾಗಿದೆ.




