ಮಂಗಳೂರು: ಕಂಬಳ ಕ್ಷೇತ್ರದಲ್ಲಿ ರಾಜನಾಗಿ ಮೆರೆದಿದ್ದ “ಚೆನ್ನ” ಸಾವು
ಮಂಗಳೂರು : ಕಂಬಳ ಕ್ಷೇತ್ರದಲ್ಲಿ ರಾಜನಾಗಿ ಮೆರೆದ ಚೆನ್ನ ಸಾವನ್ನಪ್ಪಿದ್ದಾನೆ. ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ರ ಕಿಂಗ್ ಚೆನ್ನ ಇನ್ನು ನೆನಪು ಮಾತ್ರ. ತರಬೇತಿಯಿಲ್ಲದೆ 4 ರ ಹರೆಯದಲ್ಲೇ ಕಂಬಳಕ್ಕೆ ಇಳಿದಿದ್ದ ಚೆನ್ನ ಕಂಬಳಾಭಿಮಾನಿಗಳಿಗೆ ಅಚ್ಚುಮೆಚ್ಚಿನವನಾಗಿದ್ದ. ಹಲವಾರು ಪದಕ ಗೆದ್ದಿರುವ ಕೀರ್ತಿ ಗಳಿಸಿದ್ದಾನೆ.
ಕಡಂದಲೆ ಕಾಳು ಪಾಣಾರ ಅವರ ಹಟ್ಟಿಯಲ್ಲಿದ್ದ ಚೆನ್ನನನ್ನು ಬಾರ್ಕೂರು ಶಾಂತಾರಾಮ ಶೆಟ್ಟಿ ಸುಮಾರು 22 ವರ್ಷಗಳ ಹಿಂದೆ ತಮ್ಮ ಹಟ್ಟಿಗೆ ತಂದಿದ್ದರು. ಮೂಡಬಿದಿರೆಯ ಕೋಟಿ-ಚೆನ್ನಯ ಕಂಬಳದ ಮೊದಲ ಮೂರು ವರ್ಷವೂ ನೇಗಿಲು ಜೂನಿಯರ್ ವಿಭಾಗದಲ್ಲಿ ಬಾರ್ಕೂರು ಶಾಂತಾರಾಮ ಶೆಟ್ಟಿಯವರಿಗೆ ಚೆನ್ನ ಪದಕ ಗೆದ್ದು ಕೊಟ್ಟಿದ್ದ. ಬಳಿಕ ಸೀನಿಯರ್ ಆದಾಗ ಚೆನ್ನ ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ರ ಹಟ್ಟಿಗೆ ತೆರಳಿದ್ದ.




