ಅಳಿಕೆ ಗ್ರಾ.ಪಂ: 79ನೇ ಸ್ವಾತಂತ್ರ್ಯೋತ್ಸವ ಆಚರಣೆ
ಅಳಿಕೆ ಗ್ರಾಮ ಪಂಚಾಯತ್ 79 ನೇ ಸ್ವತಂತ್ರ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ವನ್ನು ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ನೆರವೇರಿಸಿದರು.
ಈ ಸಂಧರ್ಭದಲ್ಲಿ ಮುಖ್ಯಅತಿಥಿ ಯಾಗಿ ಕಾನ ಸುಂದರ ಭಟ್ ಆಗಮಿಸಿ ಮುಖ್ಯ ಭಾಷಣ ಮಾಡಿದರು. ಈ ಸಮಯ ಅಳಿಕೆ ಗ್ರಾಮ ಪಂಚಾಯತ್ ವತಿಯಿಂದ 12 ಯುವ ಸಂಘಟನೆ ಗಳಿಗೆ ಕ್ರೀಡ ಸಾಮಗ್ರಿ ವಿತರಣೆ ಮಾಡಲಾಯಿತು.
ಪಂಚಾಯತ್ ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ಪದಾಧಿಕಾರಿಗಳು, ಗ್ರಾಮದ ವಿವಿಧ ಸಂಘಟನೆ ಯ ಸದಸ್ಯರು ಹಾಜರಿದ್ದರು.ಪಂಚಾಯತ್ ಸದಸ್ಯರಾದ ಸದಾಶಿವ ಶೆಟ್ಟಿ ಯವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು ಪಂಚಾಯತ್ ಕಾರ್ಯದರ್ಶಿ ವಂದನಾರ್ಪಣೆ ಮಾಡಿದರು.




