ದೀಪಾವಳಿ ಸಂದರ್ಭ ಜಿಎಸ್ಟಿ ದರದಲ್ಲಿ ಇಳಿಕೆ: ಪ್ರಧಾನಿ ಮೋದಿ
ನವದೆಹಲಿ : ಸ್ವಾತಂತ್ರ್ಯೋತ್ಸವದ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ಭಾರತದ ಜನತೆಗೆ ಗುಡ್ ನ್ಯೂಸ್ ಕೊಟ್ಟಿದ್ದು, ದೀಪಾವಳಿ ಸಂದರ್ಭ ಜಿಎಸ್ ಟಿ ದರದಲ್ಲಿ ಇಳಿಕೆ ಮಾಡಲಾಗುವುದು ಎಂದಿದ್ದಾರೆ.
79ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಲ್ಲಿ ಭಾಷಣದ ವೇಳೆ ಮೋದಿ, ಬೆಳಕಿನ ಹಬ್ಬ ಬರುವ ಹೊತ್ತಿಗೆ, ರಾಜ್ಯಗಳೊಂದಿಗೆ ಸಮಾಲೋಚಿಸಿ ಜಿಎಸ್‌ಟಿಯಲ್ಲಿ ಪ್ರಮುಖ ಬದಲಾವಣೆಗಳು ಮತ್ತು ಸೇರ್ಪಡೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.
ಪರೋಕ್ಷ ತೆರಿಗೆ ವ್ಯವಸ್ಥೆಯು 8 ವರ್ಷಗಳನ್ನು ಪೂರ್ಣಗೊಳಿಸಿರುವುದರಿಂದ ಜಿಎಸ್‌ಟಿಯಲ್ಲಿ ಸುಧಾರಣೆಗಳನ್ನು ಕೈಗೊಳ್ಳುವ ಸಮಯ ಬಂದಿದೆ. ಈ ಸುಧಾರಣೆಗಳು ಸಾಮಾನ್ಯ ಜನರ ಮೇಲಿನ ತೆರಿಗೆ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿವೆ ಹಾಗೂ ಭಾರಿ ಪರಿಹಾರ ನೀಡಲಿವೆ. ಇದಿರಂದ ಸಣ್ಣ ಮತ್ತು ಮಧ್ಯಮ ಉದ್ಯಮಗಳು ಮತ್ತು ಎಂಎಸ್‌ಎಂಇಗಳಿಗೆ ದೊಡ್ಡ ಪ್ರಮಾಣದಲ್ಲಿ ಪ್ರಯೋಜನವಾಗಲಿದೆ. ಜಿಎಸ್‌ಟಿ ಸುಧಾರಣೆಗಳ ನಂತರ, ಅನೇಕ ಅಗತ್ಯ ವಸ್ತುಗಳು ಅಗ್ಗದ ಬೆಲೆಯಲ್ಲಿ ಸಿಗಲಿವೆ, ಇದು ದೇಶದ ಆರ್ಥಿಕತೆಯನ್ನು ಬಲಪಡಿಸಲಿದೆ ಎಂದು ಮೋದಿ ಹೇಳಿದರು.




