ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಶ್ರೀ(81) ತಡರಾತ್ರಿ 12.01ರ ಸುಮಾರಿಗೆ ವಿಧಿವಶರಾಗಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ನಿಶ್ಚಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ವಿಧಿವಿಧಾನ ನಡೆಯಲಿದ್ದು, ಕೆಂಗೇರಿಯಲ್ಲಿನ ಮಠದ ಆವರಣದಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.