February 2, 2026

ಕಟ್ಟಡದಲ್ಲಿ ಅಗ್ನಿ ದುರಂತ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು

0
image_editor_output_image1882552775-1755329493429.jpg

ಬೆಂಗಳೂರು: ಇಲ್ಲಿನ ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ದುರಂತದಲ್ಲಿ ಸಜೀವ ದಹನವಾದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ.

ಇನ್ನೂ ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ನಮ್ಮ ಪೊಲೀಸ್ರು ಪರಿಶೀಲನೆ ಮಾಡ್ತಿದ್ದಾರೆ.

ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದ್ರೆ ಒಂದು ಫ್ಯಾಮಿಲಿ ಮಾತ್ರ ಬೆಂಕಿ ಕೆನ್ನಾಲಿಗೆಗೆ ಸಿಲುಕಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!