ಬ್ರೇಕ್ ಫೇಲ್ ಕಂದಕಕ್ಕೆ ನುಗ್ಗಿದ ಬಸ್
ಆನೇಕಲ್: ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಕಂದಕಕ್ಕೆ ಬಿಎಂಟಿಸಿ ಬಸ್ ನುಗ್ಗಿದ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ ನಡೆದಿದೆ.
ಪ್ರಯಾಣಿಕರಿದ್ದ ಬಸ್ ಚಲಿಸುತ್ತಿರುವಾಗಲೇ ಏಕಾಏಕಿ ಬ್ರೇಕ್ ಫೇಲ್ ಆಗಿದೆ. ಬ್ರೇಕ್ ಫೇಲ್ ಆದ ಪರಿಣಾಮ ಬಸ್ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಕಂದಕಕ್ಕೆ ನುಗ್ಗಿದೆ.
ಘಟನೆಯಲ್ಲಿ ಪ್ರಯಾಣಿಕರು ಸೇಫ್ ಆಗಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ.
ಜಿಗಣಿ ಡಿಪೋಗೆ ಸೇರಿದ ಬಿಎಂಟಿಸಿ ಬಸ್ ಇದಾಗಿದ್ದು, ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




