February 2, 2026

ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶ: ಐವರು ಸ್ಥಳದಲ್ಲೇ ಸಾವು

0
image_editor_output_image-1883425793-1755511168664.jpg

ಹೈದರಾಬಾದ್‌: ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್ ತಂತಿ ತಗುಲಿ ಐವರು ಸಾವನ್ನಪ್ಪಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಕೃಷ್ಣಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರ ವಿಕಾಸ್ (39), ಮತ್ತು ರಾಜೇಂದ್ರ ರೆಡ್ಡಿ (45) ಮೃತರು ಎಂದು ಗುರುತಿಸಲಾಗಿದೆ.

ಹೈದರಾಬಾದ್‌ನ ರಾಮಂತಪುರದ ಗೋಕುಲನಗರದಲ್ಲಿ ತಡರಾತ್ರಿ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಅಷ್ಟಮಿಯ ಮೆರವಣಿಗೆಯಂದು ರಥ ಚಲಿಸುತ್ತಿದ್ದ ವೇಳೆ ಅದರ ಮೇಲೆ ವಿದ್ಯುತ್ ತಂತಿ ತಗುಲಿದೆ. ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!