February 2, 2026

ಉಪ್ಪಿನಂಗಡಿ: ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿಯಾದ ಪ್ರಕರಣ: ಆರೋಪಿಯನ್ನು ಬಂಧಿಸಿದ ಪೊಲೀಸರು

0
image_editor_output_image1532660335-1755584283681

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ದಿನಾಂಕ 04-06-2025 ರಂದು  ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ತೂಕದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಕ್ರ 48-2025 ಕಲಂ 309(4)ಬಿ ಎನ್ ಎಸ್ ಅಡಿ ಪ್ರಕರಣ ದಾಖಲಾಗಿರುತ್ತದೆ. 

       ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಲಾಗಿ ಆರೋಪಿ ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಎಂಬಾತನನ್ನು ಪುತ್ತೂರು, ನೆಕ್ಕಿಲಾಡಿ ಎಂಬಲ್ಲಿಂದ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿರುತ್ತದೆ.

ಆರೋಪಿತನಿಂದ ಅಂದಾಜು ರೂ 4,54,000/-ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ  ಸೊತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಸದ್ರಿ ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಪತ್ತೆಕಾರ್ಯದಲ್ಲಿ, ಮಾನ್ಯ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡರವರ ಮಾರ್ಗದರ್ಶನದಲ್ಲಿ, ಮಾನ್ಯ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಕಾರ್ಯಚರಣೆ ನಡೆಸಿರುತ್ತದೆ.

Leave a Reply

Your email address will not be published. Required fields are marked *

error: Content is protected !!