ಲೋ ಬಿಪಿಯಿಂದ 6 ವರ್ಷದ ಬಾಲಕ ಸಾವು
ಚಾಮರಾಜನಗರ: ಲೋ ಬಿಪಿಯಿಂದ 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಚಾಮರಾಜನಗರದ ಬನ್ನಿತಾಳಪುರ ಗ್ರಾಮದಲ್ಲಿ ನಡೆದಿದೆ.
ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಆರ್ಯ ಮೃತ ಬಾಲಕ. ಈತನಿಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯೂ ಇತ್ತು ಎನ್ನಲಾಗಿದೆ. ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೂಡಲೇ ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಲೋ ಬಿಪಿಯಿಂದ ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ.




