ಮಲ್ಪೆ: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಲ್ಪೆ: ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯೋರ್ವನನ್ನು ಮಲ್ಪೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರಿನ ಜಪ್ಪು ಮಾರ್ಕೆಟ್ ನಿವಾಸಿ, ಮೊಹಮ್ಮದ್ ಸಮೀರ್ ಬಂಧಿತ ಆರೋಪಿ. ಈತ ಮಲ್ಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನೀಲಕುಮಾರ ಮತ್ತು ಸಿಬ್ಬಂದಿ ಸುರೇಶ್, ವಿಶ್ವನಾಥ, ಕುಬೇರ ಅವರ ತಂಡ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.





