February 2, 2026

ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image305633081-1755588366599.jpg

ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪಿಜಿ ವಿದ್ಯಾರ್ಥಿನಿ ಔಷಧಿ‌ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಬೆಂಗಳೂರು ಮೂಲದ ಡಾ.ಪ್ರಿಯಾ ಕಾರ್ತಿಕ (27) ಮೃತ ಯುವತಿ. ಬೆಳಗಾವಿಯ ಬಿಮ್ಸ್ ನಲ್ಲಿ ಮನೋರೋಗ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಆಗಿದ್ದಾರೆ.

ಸ್ಥಳಕ್ಕೆ ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಈ ಕುರಿತು ಮಾಹಿತಿ ನೀಡಿದ ಅವರು, 6.30ಕ್ಕೆ ಆಸ್ಪತ್ರೆಯಲ್ಲಿ ಡ್ಯೂಟಿ ಮುಗಿಸಿ ವಿದ್ಯಾರ್ಥಿನಿ ತನ್ನ ರೂಮಿಗೆ ಹೋಗಿದ್ದರು. ರಾತ್ರಿ‌ 8 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ತಿಳಿಯಿತು. ಮೇಲ್ನೋಟಕ್ಕೆ ಯಾವುದೋ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಸ್ಪಷ್ಟ ಮಾಹಿತಿ ಸಿಗಲಿದೆ. ಪೊಲೀಸರು ತನಿಖೆ ನಡೆಸಲಿದ್ದಾರೆ‌ ಎಂದರು.

ಮಾನಸಿಕ ಕಾಯಿಲೆಯಿಂದ ವಿದ್ಯಾರ್ಥಿನಿ ಬಳಲುತ್ತಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿದ್ದರು. ಹಿಂದೆ ಒಮ್ಮೆ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಕೂಡ ಪಡೆದಿದ್ದರು ಎಂದು ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ತಿಳಿಸಿದ್ದಾರೆ. ಎಂಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!