ಶಿವಮೊಗ್ಗ: ಹಾಲಿನ ವಾಹನ, ಬೈಕ್ ನಡುವೆ ಅಪಘಾತ: ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸಾವು
ಶಿವಮೊಗ್ಗ: ಬೈಕ್ ಮತ್ತು ಹಾಲಿನ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಮೆಡಿಕಲ್ ವಿಧ್ಯಾರ್ಥಿಗಳು ಸಾವನಪ್ಪಿದ ಘಟನೆ ನಗರದ ಸರ್ಕ್ಯೂಟ್ ಹೌಸ್ ಸರ್ಕಲ್‌ನಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.
ಮೃತರನ್ನು ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ತೀವ್ರ ರಕ್ತಸ್ರಾವದ ಕಾರಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಭೀಕರ ಅಪಘಾತದ ಪರಿಣಾಮ ಹಾಲಿನ ವಾಹನದಲ್ಲಿದ್ದ ಹಾಲಿನ ಟ್ರೈಗಳೆಲ್ಲ ಕೆಳಗೆ ಬಿದ್ದು ಪ್ಯಾಕೆಟ್‌ಗಳು ಒಡೆದು ಹಾಲು ರಸ್ತೆಯ ಮೇಲೆ ಹರಿದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.




