ಉಡುಪಿ: ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ FIR ದಾಖಲು
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರವರ ಬಗ್ಗೆ ಸಾಮಾಜಿಕ ತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಮಹೇಶ ಶೆಟ್ಟಿ ತಿಮರೋಡಿಯವರ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆಗಸ್ಟ್ 16 ರಂದು ಫೇಸ್ ಬುಕ್ ಪೇಜ್ ನಲ್ಲಿ ವೀಡಿಯೋ ಮಾಡಿ ಪಕ್ಷದ ಹಿರಿಯರು, ಹಿಂದೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿ ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿರುವ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಡುಪಿ ಗ್ರಾಮಾಂತರ ಬಿಜಿಪಿಯ ಮಂಡಳಾಧ್ಯಕ್ಷ ರಾಜೀವ ಕುಲಾಲ್ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಅದರಂತೆ 196 (1),352, 353(2) BNSರಂತೆ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.





