February 2, 2026

ಪುತ್ತೂರು: ಯುವತಿಯ ಅತ್ಯಾಚಾರ, ಮಗುವಿಗೆ ಜನ್ಮ ನೀಡಿದ ಪ್ರಕರಣ: ಆರೋಪಿ ಕೃಷ್ಣ, ಸಂತ್ರಸ್ತೆ, ಮಗುವಿನ ಡಿಎನ್‌ಎ ಸಂಗ್ರಹ

0
image_editor_output_image1190031945-1755677316868.jpg

ಪುತ್ತೂರು: ವಿವಾಹವಾಗುವುದಾಗಿ ಯುವತಿಯನ್ನು ವಂಚಿಸಿ ಬಳಿಕ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೃಷ್ಣ ಜೆ ರಾವ್, ಸಂತ್ರಸ್ತೆ ಮತ್ತು ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ಮಂಗಳವಾರ ಪುತ್ತೂರು ನ್ಯಾಯಾಲಯದಲ್ಲಿ ಸಂಗ್ರಹಿಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಶ್ರೀಕೃಷ್ಣನನ್ನು ಪೊಲೀಸರು ಮಂಗಳವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಸಂತ್ರಸ್ತೆ, ಆಕೆಯ ಮಗು ಮತ್ತು ಸಂತ್ರಸ್ತೆಯ ತಾಯಿ ಹಾಜರಿದ್ದರು.

ನ್ಯಾಯಾಧೀಶರ ಸಮ್ಮುಖದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯರ ನೇತೃತ್ವದಲ್ಲಿ ವಿಧಿವಿಜ್ಞಾನ ಇಲಾಖೆಯ ಸಿಬ್ಬಂದಿ ಮೂವರ ರಕ್ತದ ಮಾದರಿಗಳನ್ನು ಸಂಗ್ರಹಿಸಿದರು. ಅವುಗಳನ್ನು ಡಿಎನ್‌ಎ ಪರೀಕ್ಷೆಗಾಗಿ ಬೆಂಗಳೂರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಒಂದು ವಾರದಲ್ಲಿ ಎಫ್‌ಎಸ್‌ಎಲ್ ವರದಿ ಬರುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!