February 1, 2026

ಪುತ್ತೂರು: ಶಾಲಾ ಬಸ್ಸಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಖಾಸಗಿ ಬಸ್: ವಿದ್ಯಾರ್ಥಿಗಳು ಅಪಾಯದಿಂದ ಪಾರು

0
image_editor_output_image-1911791534-1755677503600.jpg

ಪುತ್ತೂರು: ಶಾಲಾ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ಸಿಗೆ ಖಾಸಗಿ ಬಸ್ಸೊಂದು ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ಆ.20ರಂದು ಬೆಳಗ್ಗೆ ನಡೆದಿದೆ.

ವಿವೇಕಾನಂದ ಶಾಲೆಗೆ ಸೇರಿದ ಶಾಲಾ ಬಸ್ಸೊಂದು ವಿದ್ಯಾರ್ಥಿಗಳನ್ನು ಕರೆದುಕೊಂಡು ಪುಣಚದಿಂದ ಪುತ್ತೂರು ಕಡೆಗೆ ಬರುತ್ತಿದ್ದು, ಪುಣಚದ ಮಲ್ಲಿಕಟ್ಟೆ ತಿರುವಿನಲ್ಲಿ ಹಿಂದಿನಿಂದ ಬಂದ ಖಾಸಗಿ ಬಸ್ಸೊಂದು ಶಾಲಾ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಡಿಕ್ಕಿಯ ರಭಸಕ್ಕೆ ಖಾಸಗಿ ಬಸ್ಸಿನ ಎದುರು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿ ಹಲವು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಶಾಲಾ ಬಸ್ಸಿನ ಹಿಂಬದಿ ಸೀಟ್‌ನಲ್ಲಿ ವಿದ್ಯಾರ್ಥಿಗಳು ಕುಳಿತುಕೊಂಡಿರದೇ ಇರುವುದರಿಂದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!