ಮಂಗಳೂರು: ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸ್ಥಾಪಕ ರವೂಫ್ ಬಂದರ್(50) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮಂಗಳೂರಿನ ಬಂದರ್ ನಿವಾಸಿಯಾಗಿದ್ದ ಇವರು ಸಾಮಾಜಿಕ ಕಾರ್ಯಕರ್ತರಾಗಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಸಂಖ್ಯೆಯ ಬಂಧುಬಳಗವನ್ನು ಅಗಲಿದ್ದಾರೆ.

