February 1, 2026

ಉಡುಪಿ: 7 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image1307388324-1755763595869.jpg

ಉಡುಪಿ: ಕಳವು ಮತ್ತು ಕದ್ದ ಸೊತ್ತುಗಳನ್ನು ಸ್ವಾಧೀನ ಇರಿಸಿಕೊಂಡಿದ್ದ ಆರೋಪದ ಮೇಲೆ ಬಂಧಿತನಾಗಿ ಜಾಮೀನಿನ ಮೇಲೆ ನ್ಯಾಯಾಂಗ ಬಂಧನದಿಂದ ಹೊರ ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಏಳು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಮೈಸೂರು ಜಿಲ್ಲೆಯ ಉದಯಗಿರಿ ಶಾಂತಿನಗರ ಆರನೇ ಕ್ರಾಸ್ ನಿವಾಸಿ ಫೈರೋಜ್ ಖಾನ್ ಎಂಬಾತನನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.

2017 ರಲ್ಲಿ ಈತನ ವಿರುದ್ಧ ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 2018 ರಲ್ಲಿ ಜಾಮೀನಿನಲ್ಲಿ ಬಿಡುಗಡೆಯಾದ ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿದ್ದನು.

Leave a Reply

Your email address will not be published. Required fields are marked *

error: Content is protected !!