February 1, 2026

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ:

0
image_editor_output_image2146483733-1755759641862

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಉಡುಪಿಯ ಬಿಜೆಪಿ ಮುಖಂಡರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ಈ ಕುರಿತು ಇಬ್ಬಾರಿ ನೋಟಿಸ್ ನೀಡಿದರೂ ಸರಿಯಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಗುರುವಾರ (ಆ.21) ಉಜಿರೆಯಲ್ಲಿ ಮಹೇಶ್ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು, “ನೋಟಿಸ್‌ಗಳಿಗೆ ಸಮರ್ಪಕ ಉತ್ತರ ನೀಡದ ಕಾರಣ ಅವರನ್ನು ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದ್ದಾರೆ.

ಬ್ರಹ್ಮಾವರದಲ್ಲಿ ನಿಷೇಧಾಜ್ಞೆ ಜಾರಿ

ಘಟನೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರನ್ವಯ ಬ್ರಹ್ಮಾವರ ಪೊಲೀಸ್ ಠಾಣೆಯ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ನಿಷೇಧಾಜ್ಞೆ ಆ.21 ರಂದು ಮಧ್ಯಾಹ್ನ 1 ಗಂಟೆಯಿಂದ ಆ.22 ರಂದು ಮಧ್ಯಾಹ್ನ 1 ಗಂಟೆಯವರೆಗೆ ಅನ್ವಯವಾಗಲಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಪೊಲೀಸ್ ಅಧೀಕ್ಷಕರ ಮನವಿಯ ಮೇರೆಗೆ ಈ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!