February 1, 2026

ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ: ಪಾದಚಾರಿ ಸಾವು

0
image_editor_output_image2016205298-1755839805541.jpg

ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ.

ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48) ಮೃತ ವ್ಯಕ್ತಿ. ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಲೋಕೇಶ್ ಅವರು ಆಗಸ್ಟ್ 15ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ ರಸ್ತೆ ದಾಟುತ್ತಿದ್ದ ವೇಳೆ ಮೋಟಾ‌ರ್ ಬೈಕ್ ಒಂದು ಢಿಕ್ಕಿ ಹೊಡೆದಿತ್ತು.

ಇದರಿಂದ ಗಂಭೀರ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಲೋಕೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾಯಂಕಾಲ ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತ ಲೋಕೇಶ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!