“ಧರ್ಮಸ್ಥಳ ಪ್ರಕರಣ ” ಸಂಘ ಪರಿವಾರದ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್ ಕಾಣೆಯಾಗಿದ್ದಾರೆ: ವಿನಯಕುಮಾರ್ ಸೊರಕೆ
ವಿಜಯಪುರ: ಧರ್ಮಸ್ಥಳ ವಿಷಯದಲ್ಲಿ ಇಷ್ಟೆಲ್ಲ ಗೊಂದಲಗಳು ಉಂಟಾದರೂ ಕರಾವಳಿ ಭಾಗದ ಸಂಘ ಪರಿವಾರದ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್ ಕಾಣೆಯಾಗಿದ್ದಾರೆ. ಅವರು ಈ ಪ್ರಕರಣದಲ್ಲಿ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮರೋಡಿ ಜತೆಗಿದ್ದಾರೋ ಅಥವಾ ಧರ್ಮಸ್ಥಳದ ಜತೆಗಿದ್ದಾರೋ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮರೋಡಿ ಯಾವ ಮೂಲದವರು? ತಿಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ವಿಷಯದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೊಟ್ಟಿಲು ತೂಗುವ ಕೆಲಸ ನಡೆಯುತ್ತಿದೆ. ಕರಾವಳಿ ಭಾಗದಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ ಧರ್ಮಸ್ಥಳ ವಿಷಯದಲ್ಲಿ ಬಿಜೆಪಿ ಶಾಸಕರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗಲೂ ಪ್ರಭಾಕರ ಭಟ್ ಯಾಕೆ ಇರಲಿಲ್ಲ ಎಂದು ಪ್ರಶ್ನಿಸಿದರು




