ಕುಡುಪುವಿನಲ್ಲಿ ಆಶ್ರಫ್ ಗುಂಪು ಹತ್ಯೆ ಪ್ರಕರಣ: 10 ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್
ಮಂಗಳೂರು: ಕುಡುಪುವಿನಲ್ಲಿ ಕೇರಳ ಮೂಲದ ಆಶ್ರಫ್ ಗುಂಪು ಹತ್ಯೆ ಪ್ರಕರಣ ಸಂಬಂಧ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಕುಡುಪುವಿನ ಮೈದಾನದಲ್ಲಿ 2025ರ ಏಪ್ರಿಲ್ 27ರಂದು ಅಶ್ರಫ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಪೈಕಿ ಪ್ರಕರಣದ ಆರೋಪಿಗಳಾದ ಅನಿಲ್ ಕುಮಾರ್, ಸಾಯಿದೀಪ್, ಅನಿಲ್ ಕುಮಾರ್, ಯತಿರಾಜ್, ಮನೀಶ್ ಶೆಟ್ಟಿ, ಪ್ರದೀಪ್, ವಿವಿಯನ್ ಆಲ್ವರಿಸ್, ಶ್ರೀದತ್ತ ಧನುಷ್, ಕಿಶೋರ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ದೀಪಕ್ ಕುಮಾರ್ ಎಂಬುವವರು 19 ಮಂದಿ ಮತ್ತು ಇತರರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 37/2025, 00: 103(2), 115(2), 189(2), 190, 191(1), 191(3), 240 ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈ ಸಂಬಂಧ ಪೊಲೀಸರು 20 ಮಂದಿಯನ್ನು ಬಂಧಿಸಿದ್ದರು.




