ಬಿಗ್ ಬಾಸ್ ಖ್ಯಾತಿಯ ವಕೀಲ ಕೆ.ಎನ್. ಜಗದೀಶ್ ಕುಮಾರ್ ಬಂಧನ
ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ಪೋಲೀಸರು ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಬಂಧಿಸಿದ್ದಾರೆ.
ಜಗದೀಶ್ ಅವರನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಆರೋಪದಡಿ ಬಂಧಿಸಲಾಗಿದೆ. ಮಂಜುನಾಥ ಎಂಬುವವರು ನೀಡಿದ್ದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿತ್ತು.
ಈ ಹಿಂದೆ, ಆಗಸ್ಟ್ 21ರಂದು ಕೊಡಿಗೇಹಳ್ಳಿ ಪೊಲೀಸರು ಜಗದೀಶ್ ಅವರಿಗೆ ನೋಟಿಸ್ ನೀಡಲು ಮನೆಗೆ ತೆರಳಿದ್ದಾಗ, ಅವರು ಬಾಗಿಲು ತೆರೆಯದೆ ಸಹಕರಿಸಿರಲಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ ಜಗದೀಶ್, ‘ನಾನು ಮನೆಯಲ್ಲಿ ಇಲ್ಲದಿರುವಾಗ ಕೊಡಿಗೇಹಳ್ಳಿ ಪೊಲೀಸರು ಯಾವುದೇ ನೋಟಿಸ್ ನೀಡದೆ ಮನೆಗೆ ಬಂದಿದ್ದಾರೆ’ ಎಂದು ದೂರಿದ್ದರು. ಈ ಘಟನೆಯು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.




