ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆಯನ್ನು ಶನಿವಾರ (ಆ.23) ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಿದೆ.
ಬೆಳಗ್ಗೆ 11ರಿಂದ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ವಿಚಾರಣೆ ಆರಂಭಿಸಿದ ವೇಳೆ ಹೆಚ್ಚಿನ ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನ ೩ ಗಂಟೆಗೆ ಮುಂದೂಡಿದೆ.




