February 1, 2026

ಕುಂದಾಪುರ: ಕಲಾ ನಿರ್ದೇಶಕ ನಟ ಮಂಗಳೂರು ದಿನೇಶ್ ನಿಧನ

0
image_editor_output_image-1254255206-1756096860361.jpg

ಉಡುಪಿ ಅಗಸ್ಟ್ 25: ಕನ್ನಡ ಚಿತ್ರರಂಗದ ಖ್ಯಾತ ಕಲಾನಿರ್ದೇಶಕ ಹಾಗೂ ಪೋಷಕನಟ ಮಂಗಳೂರು ದಿನೇಶ್ ನಿಧನರಾಗಿದ್ದಾರೆ. ಕುಂದಾಪುರದಲ್ಲಿರುವ ತಮ್ಮ ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ.

ಕೆಜಿಎಫ್ ಬಾಂಬೆ ಡಾನ್ ಪಾತ್ರದಲ್ಲಿ ನಟಿಸಿದ್ದ ದಿನೇಶ್ ಅವರು ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ, ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದರು.

ಬಣ್ಣದ ಲೋಕದಲ್ಲಿ ದಿನೇಶ್ ಮಂಗಳೂರು ಅವರು ಅಪಾರ ಅನುಭವ ಹೊಂದಿದ್ದರು. ‘ಕಾಂತಾರ’ ಚಿತ್ರದ ಶೂಟಿಂಗ್ ವೇಳೆ ಅವರಿಗೆ ಪಾರ್ಶ್ವವಾಯು ಆಗಿತ್ತು.

Leave a Reply

Your email address will not be published. Required fields are marked *

error: Content is protected !!