ರಾಜಸ್ಥಾನ: ಜೈಸಲ್ಮೇರ್‌ನಲ್ಲಿ ವಾಯುಪಡೆಯ ಯುದ್ಧ ವಿಮಾನ ಪತನ
ರಾಜಸ್ಥಾನ: ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ಶುಕ್ರವಾರ ರಾತ್ರಿ ಜೈಸಲ್ಮೇರ್‌ನಲ್ಲಿ ಪತನಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಯಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಡೆಸರ್ಟ್ ನ್ಯಾಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್ಪಿ ಅಜಯ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅವರು ಕೂಡ ಅಪಘಾತ ಸ್ಥಳಕ್ಕೆ ತೆರಳುತ್ತಿದ್ದಾರೆ ಎಂದು ಎಸ್ಪಿ ಹೇಳಿದರು.




