February 1, 2026

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನ ಮೊಬೈಲ್ ಪತ್ತೆ

0
image_editor_output_image1053080090-1756188192237.jpg

ಮಂಗಳೂರು: ಧರ್ಮಸ್ಥಳ ಪ್ರಕರಣಲ್ಲಿ ಸುಳ್ಳು ಹೆಣೆದಿದ್ದಾರೆ ಎಂಬ ಶಂಕೆಯಿಂದ ಎಸ್ ಐಟಿ ತನಿಖೆ ನಡೆಸುತ್ತಿದ್ದು, ಇಂದು ಬೆಳಗ್ಗೆ ಬೆಳ್ತಂಗಡಿಯ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ದೂರುದಾರನಾಗಿದ್ದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಹಿನ್ನೆಲೆ ದಾಳಿ ನಡೆಸಿದೆ. ಈ ವೇಳೆ ಚಿನ್ನಯ್ಯನ ಮೊಬೈಲ್ ಪತ್ತೆ ಆಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಶೋಧಕ್ಕೆ ಸರ್ಚ್ ವಾರಂಟ್ (ನ್ಯಾಯಾಲಯದ ಅನುಮತಿ) ಪಡೆದ ಎಸ್ ಐ ಟಿ, ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ತಿಮರೋಡಿ ಮನೆಗೆ ಮಹಜರು ನಡೆಸಿ ತೀವ್ರ ಶೋಧ ನಡೆಸಿತು.

ಮಹೇಶ್ ತಿಮರೋಡಿ ಹಾಗೂ ಆವರ ಸಹೋದರ ಮೋಹನ್ ಕುಮಾರ್ ಶೆಟ್ಟಿ ಮನೆಯಲ್ಲಿ ಕೂಡಾ ಎಸ್ ಐಟಿ ತನಿಖೆ ನಡೆಸುತ್ತಿದೆ. ಜಿತೇಂದ್ರ ದಯಾಮ ಸೇರಿದಂತೆ ಹಲವು ಅಧಿಕಾರಿಗಳ ತಂಡ ಕೆಲಸ ಮಾಡುತ್ತಿದೆ. ಚಿನ್ನಯ್ಯನ 25 ವಿಡಿಯೋಗಳನ್ನು ಮಾಡಲಾಗಿದೆ. ಈಗಾಗಲೆ 3 ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ.

Leave a Reply

Your email address will not be published. Required fields are marked *

error: Content is protected !!