February 1, 2026

ಮಂಗಳೂರು: ನವೀನ್ ಪೂಜಾರಿ ಕೊಲೆ ಪ್ರಕರಣ: ಆರೋಪಿ ಪರೀಕ್ಷಿತ್ ಬಂಧನ

0
image_editor_output_image624572131-1756276873531.jpg

ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ನಡೆದ ಮಂಗಳೂರು ಮೂಲದ ನವೀನ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬೆಳ್ತಂಗಡಿ ತಾಲೂಕು ನಾಡ ನಿವಾಸಿ ಪರೀಕ್ಷಿತ್(44) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪರೀಕ್ಷಿತ್‌ಗೆ ಪರಿಚಯ ಇದ್ದ ಮಹಿಳೆ ಜೊತೆ ನವೀನ್ ಪೂಜಾರಿ ಗೆಳೆತನವನ್ನು ಬೆಳೆಸಿ ಆತ್ಮೀಯರಾಗಿದ್ದರು. ಈ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ನಡೆದಿದ್ದು ಇದುವೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ.

ನಿನ್ನೆ(ಆ.26) ಬೆಳಗಿನ ಜಾವ ನವೀನ್ ಪೂಜಾರಿ ಮೃತದೇಹವು ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ತನಿಖೆ ನಡೆಸಿದಾಗ ಅವರನ್ನು ಪರೀಕ್ಷಿತ್ ಎಂಬಾತ ಕೊಲೆ ಮಾಡಿರುವುದು ತಿಳಿದುಬಂದಿದೆ. ಅದರಂತೆ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕ‌ರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!